ಮಂಗಳೂರು: ನಗರದ ಉರ್ವ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಆವರಣದಲ್ಲಿ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಮಂಗಳೂರು ಇದರ ಸಹಯೋಗದೊಂದಿಗೆ ನಾಳೆ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಗೋಕರ್ಣನಾಥ ಶಿಕ್ಷಣ ಸಂಸ್ಥೆಯ ಸಂಚಾಲಕ ವಸಂತ ಕಾರಂದೂರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ದೇಶದ ಪ್ರಮುಖ 25 ಕ್ಕೂ ಹೆಚ್ಚಿನ ಕಂಪನಿಗಳು ಭಾಗವಹಿಸಲಿದೆ. ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮಾಡುವ ಮೂಲಕ ಆಯ್ಕೆ ಮಾಡಲಿದ್ದಾರೆ. ವಿಶೇಷವಾಗಿ ವಾಣಿಜ್ಯ, ಕಲೆ, ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ. ಐಟಿಐ, ಡಿಪ್ಲೊಮಾ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಮುಕ್ತ ಅವಕಾಶ ಇದೆ.
ಉದ್ಯೋಗಾಕಾಂಕ್ಷಿಗಳು ಕಾಲೇಜಿನ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ತಮ್ಮ ಹೆಸರನ್ನು ಆನ್ಲೈನ್ ನಲ್ಲಿ ನೊಂದಾಯಿಸಬಹುದು. ಸಂದರ್ಶನಕ್ಕೆ ಬರುವಾಗ ಅಭ್ಯರ್ಥಿಗಳು ರೆಸ್ಯೂಮ್ ಮತ್ತು ಶೈಕ್ಷಣಿಕ ದಾಖಲೆ ಪತ್ರಗಳೊಂದಿಗೆ ಹಾಜರಾಗಬೇಕು ಎಂದು ಪ್ರಾಂಶುಪಾಲರಾದ ಜಯಪ್ರಕಾಶ್ ತಿಳಿಸಿದರು.


