ಪ್ರಾದೇಶಿಕ

ಮಂಗಳೂರು: ಜುಲೈ 23 ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

 



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆಯಿದೆ‌. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತುಕ್ರಮ ಕೈಗೊಂಡಿದ್ದು, ಜುಲೈ 23ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌.


ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಮತ್ತು ಪದವಿ ಪೂರ್ವ ವಸತಿ ಕಾಲೇಜುಗಳಿಗೆ ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಕಲಂ 51(ಬಿ)ರ ಅನ್ವಯ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.