ಮಂಗಳೂರು: ನಗರದ ಸುರತ್ಕಲ್‌ನ ದೊಡ್ಡಕೊಪ್ಲ ಬಳಿಯ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಿದ ಘಟನೆ ನಡೆದಿದೆ.
ತಕ್ಷಣ ಸ್ಥಳೀಯ ಮೀನುಗಾರರು ಧಾವಿಸಿ ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.
ಉಡುಪಿ ಜಿಲ್ಲೆಯ ಮಲ್ಪೆ ಮೂಲದ ಬೋಟ್ ದೊಡ್ಡಕೊಪ್ಲ ಬಳಿ ಮೀನುಗಾರಿಕೆಗೆ ಬಂದಿತ್ತು. ಆದರೆ ಏಕಾಏಕಿ ಬೋಟ್ ಸಮುದ್ರದಲ್ಲಿ ಮುಳುಗಿದೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಭಾರತೀಯ ಕರಾವಳಿ ರಕ್ಷಣಾ ಪಡೆ (ಕೋಸ್ಟ್ ಗಾರ್ಡ್) ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
