ವಿಟ್ಲ:ಕಳೆದ 8 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಯೊಬ್ಬನನ್ನು ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮಂಗಳೂರಿನಲ್ಲಿ ಯಶಸ್ವಿಯಾಗಿ ದಸ್ತಗಿರಿ ಮಾಡಿದ್ದಾರೆ.
ಮಂಗಳೂರಿನ ಕೊಲ್ಲೂರು ನಿವಾಸಿ ವಿಜಯ (32) ದಸ್ತಗಿರಿಯಾದ ಆರೋಪಿಯಾಗಿದ್ದಾನೆ.
ಘಟನೆಯ ಹಿನ್ನೆಲೆ:
ಆರೋಪಿ ವಿಜಯ ಎಂಬಾತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ಕಳ್ಳತನ ಪ್ರಕರಣ (ಅಪರಾಧ ಸಂಖ್ಯೆ: 45/2017, ಕಲಂ: 379 ಜೊತೆಗೆ 34 IPC) ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತ, ಕಳೆದ ಸುಮಾರು 8 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ತಲೆಮರೆಸಿಕೊಂಡಿದ್ದ ಆರೋಪಿಯ ಸುಳಿವು ಲಭಿಸಿದ ಹಿನ್ನೆಲೆಯಲ್ಲಿ, ದಿನಾಂಕ: 23-07-2026 ರಂದು ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪೋಲಿಸ್ ಕಾನ್‌ಸ್ಟೇಬಲ್ (PC) ಶಿವಾನಂದ ಹಾಗೂ ಪೋಲಿಸ್ ಕಾನ್‌ಸ್ಟೇಬಲ್ (PC) ಯಂಕಪ್ಪ ಅವರು ಮಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
