ರಾಜ್ಯ

ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಬೇಡ: ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್

 


 


ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ FIR  ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ವಾದ-ಪ್ರತಿವಾದ ಆಲಿಸಿ ಜುಲೈ 31ಕ್ಕೆ ವಿಚಾರಣೆ ಮುಂದೂಡಿದೆ. ಅಲ್ಲಿವರೆಗೂ ಬಲವಂತದ ಕ್ರಮ ಬೇಡ ಎಂದು ಪೊಲೀಸರಿಗೆ ಸೂಚಿಸಿದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದರ ಕುರಿತು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸಿ.ಟಿ.ರವಿ ವಿರುದ್ಧ ಜಾಮೀಯಾ ಮಸೀದಿ ಸಮಿತಿ ಅಧ್ಯಕ್ಷ ಮುದಾಸೀರ್ ಎಂಬುವರು ನೀಡಿದ ದೂರಿನ ಮೇರೆಗೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಮನೆಗೆ ತೆರಳಿ ನೋಟಿಸ್ ನೀಡಲು ಮುಂದಾಗಿದ್ದರು. ಆದರೆ ಸಿ.ಟಿ ರವಿ ಅವರು ನೋಟಿಸ್ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅವರ ಮನೆಯ ಕಾಂಪೌಂಡ್ಗೆ ಪೊಲೀಸರು ನೋಟಿಸ್ ಅಂಟಿಸಿದ್ದರು. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಿ.ಟಿ. ರವಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ಎಫ್ಐಆರ್ ಗಮನಿಸಿದ ನ್ಯಾಯಾಲಯ, ಏಕೆ ಬೇಕು? ಯಾಕೆ ರೀತಿ ಹೇಳಿದಿರಿ? ಎದೆ ಸೀಳಿದರೆ ಎರಡಕ್ಷರ ಇಲ್ಲ? ಇದೆಲ್ಲ ಏಕೆ ಬೇಕು ಎಂದು ಸಿ. ಟಿ. ರವಿ ಪರ ವಕೀಲರನ್ನು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ. ರವಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು, ಯಾರ ಭಾವನೆಗೂ ಧಕ್ಕೆ ತರುವ ಕೆಲಸವಾಗಿಲ್ಲ. ಮೂರನೇ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ವೇಳೆ ಮಧ್ಯಪ್ರವೇಶಿಸಿದ ಎಸ್ಪಿಪಿ ಬಿ.ಎನ್‌. ಜಗದೀಶ್ಅವರು, ಪೊಲೀಸರು ನೋಟಿಸ್ ನೀಡಲು ತೆರಳಿದ್ದಾಗ ಅರ್ಜಿದಾರರು ಸರಿಯಾಗಿ ಸ್ಪಂದಿಸಿಲ್ಲ. ತಮ್ಮ ಬೆಂಬಲಿಗರ ಜತೆ ಕುಳಿತು ಕಾಂಗರೂ ಕೋರ್ಟ್ ನಡೆಸಿ, ನೋಟಿಸ್ ನೀಡಲು ತೆರಳಿದ್ದ ಅಧಿಕಾರಿಗಳನ್ನೇನಿಂದಿಸಿ, ಬೆದರಿಸಿದ್ದಾರೆ. ಇದಕ್ಕೆ ಸಂಬಂಧಿಸಿದವಿಡಿಯೋ ಸಹ ನಮ್ಮ ಬಳಿ ಇದೆ ಎಂದರು.

ಇದನ್ನು ನಿರಾಕರಿಸಿದ ಅರುಣ್ ಶ್ಯಾಮ್, ಪೊಲೀಸರು ಎಫ್ಐಆರ್ ಪ್ರತಿಒದಗಿಸದೆಯೇ ನೋಟಿಸ್ ನೀಡಲು ತೆರಳಿದ್ದರು. ಇದರಿಂದ ಅರ್ಜಿದಾರರು ಎಫ್ಐಆರ್ ಎಲ್ಲಿ, ಯಾವ ಪ್ರಕರಣ, ಏಕೆ ಇಲ್ಲಿಗೆ ಬಂದಿದ್ದೀರಿ ಎಂದು ಪೊಲೀಸರನ್ನು ಪ್ರಶ್ನಿಸಿದ್ದಾರೆ. ತಮ್ಮ ಹಕ್ಕಿನ ಭಾಗವಾಗಿ ಎಫ್ಐಆರ್ ಪ್ರತಿಯನ್ನು ಕೇಳಿದ್ದಾರೆಯೇ ಹೊರತು ಬೇರೇನೂ ಅಲ್ಲ ಎಂದು ಹೇಳಿದರು.

ವಾದ-ಪ್ರತಿವಾದ ಆಲಿಸಿದ ಕೋರ್ಟ್, ಜುಲೈ 31ಕ್ಕೆ ವಿಚಾರಣೆ ಮುಂದೂಡಿತು. ಅಲ್ಲಿವರೆಗೂ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಸೂಚಿಸಿತು.

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಆತ ಬಂದು ನೀಟ್ವಿರುದ್ಧ ಹೋರಾಟ ಮಾಡುತ್ತಿದ್ದಾನೆ ಎಂದರೆ ಏನರ್ಥ ಎಂದು ಸಿ.ಟಿ.ರವಿ ಹೇಳಿಕೆ ನೀಡಿದ್ದರು. ಇದು ವಿವಾದ ಸ್ವರೂಪ ಪಡೆದುಕೊಂಡಿತ್ತು. ಸಮುದಾಯವೊಂದರ ಗುರಿಯಾಗಿಸಿ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಮುದಾಸೀರ್ ಅವರು ಸಿ.ಟಿ. ರವಿ ವಿರುದ್ಧ ದೂರು ನೀಡಿದ್ದರು.

ತಮ್ಮ ಮೇಲಿನ ಆರೋಪ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ್ದ ಸಿ.ಟಿ. ರವಿ ಅವರು ಸಮುದಾಯವನ್ನು ಉದ್ದೇಶಿಸಿ ತಾನು ಮಾತನಾಡಿಲ್ಲ. ವಿಚಾರದಲ್ಲಿ ತಾನು ತಪ್ಪು ಮಾಡಿಲ್ಲ ಎಂದು ತಮ್ಮ ಹೇಳಿಕೆಯ್ನ ಸಮರ್ಥಿಸಿಕೊಂಡಿದ್ದರು. ಸದ್ಯ ಚಿಕ್ಕಮಗಳೂರಿನ ನ್ಯಾಯಾಲಯದಿಂದ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆಯಾಗಿದೆ.