ಮಂಗಳೂರು: ಇತ್ತೀಚೆಗೆ ನಿಧನರಾದ ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ಎಂ. ದೇವದಾಸ್ ಸ್ಮರಣಾರ್ಥ ಆ. 10ರಂದು ಬೆಳಗ್ಗೆ 10.30ಕ್ಕೆ ಉರ್ವಸ್ಟೋರ್‌ನ ಅಂಬೇಡ್ಕರ್ ಭವನದಲ್ಲಿ ನುಡಿನಮನ ಆಯೋಜಿಸಲಾಗಿದೆ.
ಮಾಜಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸುವರು. ರಾಜ್ಯ ಸಂಚಾಲಕ ಎಂ. ಸೋಮಶೇಖರ ಹಾಸನ ಅಧ್ಯಕ್ಷತೆ ವಹಿಸಲಿದ್ದಾರೆ. ದಸಂಸ ಸ್ಥಾಪಕ ಸದಸ್ಯ ಶ್ರೀಧರ್ ಕಲಿವೀರ್, ದಸಂಸ ಅಂಬೇಡ್ಕರ್‌ವಾದದ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ದಸಂಸ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಅಧ್ಯಕ್ಷ ವೆಂಕಟಗಿರಿಯಯ್ಯ, ಮಾಜಿ ಸಂಚಾಲಕ ಸತ್ಯ ಭದ್ರಾವತಿ, ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಪ್ರಮುಖರಾದ ಪ್ರೊ. ನರೇಂದ್ರ ನಾಯಕ್, ಭಾಗ್ಯಮ್ಮ ನಾರಾಯಣಸ್ವಾಮಿ, ವಾಸುದೇವ ಉಚ್ಚಿಲ, ಮುನೀರ್ ಕಾಟಿಪಳ್ಳ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಸಂಘಟನಾ ಸಂಚಾಲಕ ರಘು ಕೆ. ಎಕ್ಕಾರು, ಜಿಲ್ಲಾ ಸಂಘಟನಾ ಸಂಚಾಲಕರಾದ ರಾಜಯ್ಯ, ಕೃಷ್ಣಾನಂದ ಡಿ., ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಬಾಬು ಕುಂದರ್ ಇದ್ದರು.