ಶೇಮ್ ಶೇಮ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ - ದಲಿತರ ಕುಂದು ಕೊರತೆ ಸಭೆಗೆ ಜಿಲ್ಲಾಧಿಕಾರಿಯ ಅನುಪಸ್ಥಿತಿ : ದಲಿತ ಮುಖಂಡರ ಆಕ್ಷೇಪ, ಸಭೆ ಮುಂದೂಡಿಕೆ.
ದಕ್ಷಿಣ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕುಂದು ಕೊರತೆಯ ಸಭೆಯನ್ನು ಸುಮಾರು ಒಂದುವರೆ ವರ್ಷಗಳ ನಂತರ ಇಂದು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿಯವರು ಕರೆದಿದ್ದು ಆದರೆ ಸದ್ರಿ ಸಭೆಗೆ ಜಿಲ್ಲಾಧಿಕಾರಿಗಳು ಗೈರು ಹಾಜರಾಗಿದ್ದು ಕಿಕ್ಕಿರಿದು ಸೇರಿದ ಸಭೆಯಲ್ಲಿ ಈ ಬಗ್ಗೆ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಜಿಲ್ಲೆಯ ವಿವಿಧ ತಾಲೂಕುಗಳಿಂದ ನೂರಾರು ಸಂಖ್ಯೆಯ ದಲಿತ ಸಮುದಾಯದ ಪ್ರಮುಖರು ಈ ಭಾಗವಹಿಸಿದ್ದರು.
ಜಿಲ್ಲಾಧಿಕಾರಿಯವರ ಅನುಪಸ್ಥಿತಿಯಲ್ಲಿ ನಡೆದ ಈ ಸಭೆಯನ್ನು ಅಪಾರ ಜಿಲ್ಲಾಧಿಕಾರಿ ರಾಜು ಸಭೆಯ ನೇತೃತ್ವದಲ್ಲಿ ಸಭೆ ನಡೆಸಲು ಮುಂದಾದಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಬಣ)ದ ಜಿಲ್ಲಾ ಸಂಘಟನಾ ಸಂಚಾಲಕ ರಘು ಕೆ ಎಕ್ಕಾರ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು, ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣಾನಂದ ಡಿ.ಯವರು ಕೂಡ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾಧಿಕಾರಿಯವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಸಭೆ ನಡೆಸುವಂತೆ ತೀವ್ರ ಒತ್ತಾಯ ಮಾಡಿದರು. ಇದರಿಂದ ತೀವ್ರ ಮುಜುಗರಕ್ಕೊಳಗಾದ ಜಿಲ್ಲಾಡಳಿತ ಜಿಲ್ಲಾಧಿಕಾರಿ ಅವರೊಂದಿಗೆ ಸಂಪರ್ಕ ಸಾಧಿಸಿ ಇದೇ ತಿಂಗಳ 20ನೇ ತಾರೀಖಿನಂದು ಮರು ಸಭೆಯನ್ನು ನಿಗದಿಪಡಿಸಲಾಯಿತು.

