ಪ್ರಾದೇಶಿಕ

ಡೇವಿಡ್ ಡಿಸೋಜಾ ಕೊಲೆ ಪ್ರಕರಣಪ್ರಮುಖ ಆರೋಪಿಗೆ ಪೊಲೀಸರಿಂದ ಗುಂಡೇಟು

ಉದ್ಯಮಿ ಮತ್ತು ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಜು ಅವರಿಗೆ ಪೊಲೀಸರು ಗುಂಡೇಟು ಹಾರಿಸಿದ್ದಾರೆ.
ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಮೂವರು ಆರೋಪಿಗಳು ಇರುವ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬಂಧಿಸಿ ಕರೆತರುತ್ತಿರುವಾಗ ರಾಜು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಕಾಪು ಪಿಎಸ್ಐ ತೇಜಸ್ವಿ ಅವರು ಸರ್ವೀಸ್ ಪಿಸ್ತೂಲಿನಿಂದ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ ರಾಜುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಎಸ್ಐ ತೇಜಸ್ವಿ ಅವರಿಗೂ ಗಾಯಗಳಾಗಿದ್ದು, ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಪರಾರಿಯಾದ ಇತರ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.