ಪ್ರಾದೇಶಿಕ

ಸಾಮಾಜಿಕ ಜಾಲತಾಣ (ಫೇಸ್ ಬುಕ್) ನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದನೆ: ಮಂಡ್ಯದ ವೇದಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಜಪೆ ಠಾಣೆಯಲ್ಲಿ ದೂರು ದಾಖಲಿಸಿದ .ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ (ಪ್ರೊಫೆಸರ್ ಬಿ ಕೃಷ್ಣಪ್ಪ ಬಣ)

    ಸಾಮಾಜಿಕ ಜಾಲತಾಣ (ಫೇಸ್ ಬುಕ್) ನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದನೆ: ಮಂಡ್ಯದ ವೇದಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಜಪೆ ಠಾಣೆಯಲ್ಲಿ ದೂರು ದಾಖಲಿಸಿದ .ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ (ಪ್ರೊ. ಕೃಷ್ಣಪ್ಪ ಬಣ)                      

ಸಾಮಾಜಿಕ ಜಾಲತಾಣ (ಫೇಸ್ ಬುಕ್) ನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವ ಮಂಡ್ಯದ ವೇದಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ  ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಬಣ) ಬಜಪೆ ಠಾಣೆಯಲ್ಲಿ ದೂರು ದಾಖಲಿಸಿತು.                                    

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಂಡ್ಯ ಜಿಲ್ಲೆ ಕೆ. ಆರ್.ಪೇಟೆ ತಾಲೂಕಿನ ದೊಡ್ಡಯ್ಯ ಚೇನಹಳ್ಳ ಗ್ರಾಮದ ವೇದಮೂರ್ತಿ ಎನ್ನುವ ಮನುವಾದಿ ದಲಿತ ವಿರೋಧಿ  facebook ನಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಕುರಿತು  ಅವ್ಯಾಚ್ಯ ಶಬ್ದಗಳಿಂದ ಅಂಬೇಡ್ಕರ್ ಅವರನ್ನು ಮಾಧ್ಯಮದ ಮೂಲಕ ಸಾರ್ವಜನಿಕವಾಗಿ ನಿಂದಿಸಿ ಅವಮಾನಿಸಿರುವುದು ಖಂಡನೀಯ. 

ಅಲ್ಲದೆ ಪರಿಶಿಷ್ಟ ಜಾತಿ /ಪಂಗಡದ ಜನರಿಗಾಗಿ ಶಿಕ್ಷಣ,ಸಂಘಟನೆ, ನೌಕರಿಯಲ್ಲಿ ರಿಸರ್ವೇಶನ್ ನೀಡಿ ಕತ್ತೆಯನ್ನು ಕುದುರೆಯನ್ನಾಗಿಸಲು ನೀನು ಹೊರಟಿರುವೆ ಎಂಬುದಾಗಿ ಹೇಳಿಕೆ ನೀಡುವ ಮೂಲಕ ಇಡೀ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಸಮುದಾಯವನ್ನೇ ಅವಮಾನಿಸಿರುವನು.

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಂಬೇಡ್ಕರ್ ಅವರ ಬಗ್ಗೆ ಅವ್ಯಾಚ್ಯವಾಗಿ ಬೈದು ನಿಂದಿಸಿ, ಸಂವಿಧಾನ ಹಾಗೂ ದಲಿತ ಸಮುದಾಯವನ್ನು ಹೀಯಾಳಿಸಿರುವ ಮಂಡ್ಯದ ವೇದಮೂರ್ತಿಯವರ ಮೇಲೆ ದೇಶದ್ರೋಹ ಹಾಗೂ ಪರಿಶಿಷ್ಟ ಜಾತಿ /ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಇಂದು ದೂರು ದಾಖಲಿಸಿದೆ. 

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ರಘು ಕೆ.ಎಕ್ಕಾರ್, ಕೃಷ್ಣಾನಂದ ಡಿ, ಗಣೇಶ್ ಎಕ್ಕಾರು, ಮೋಹನ್, ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.